ವಿವಿಧ ಕೌಶಲಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ ಆಗಸ್ಟ್‌ನಲ್ಲಿ ರೆಫ್ರಿಜರೇಟರ್ ಮತ್ತು ಏರ್ ಕಂಡಿಷನಿಂಗ್, ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ಹಾಗೂ ಯುವತಿಯರಿಗಾಗಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಜು.20ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net