ಹಾವೇರಿ: ಪ್ರಸಕ್ತ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಕ್ರೀಡಾ ಪೋಷಕರು ಅರ್ಜಿ ನಮೂನೆಯನ್ನು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾವೇರಿ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ.27ರೊಳಗಾಗಿ ಸಲ್ಲಿಸಬೇಕು.