ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Former
Published on

ಹಾವೇರಿ: ಪ್ರಸಕ್ತ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಕೃಷಿಯಲ್ಲಿ ಸಾಧನೆಗೈದ ರೈತ ಮತ್ತು ರೈತರ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಬೇಕು. ಸಂಬಂಧಪಟ್ಟ ದಾಖಲೆಗಳಾದ ಜಮೀನಿನ ಉತಾರ, ಆಧಾರ್ ಕಾರ್ಡ್‌ನ ನಕಲು ಪ್ರತಿ, ಎರಡು ಪಾಸ್ ಪೋರ್ಟ ಅಳತೆಯ ಫೋಟೋ, ಗ್ರಾಮ ಲೆಕ್ಕಧಿಕಾರಿಗಳಿಂದ ಪಡೆದ ಅಖಾತೆ ಬ್ಯಾಂಕ್ ಖಾತೆಯ ನಕಲು ಪ್ರತಿ ಹಾಗೂ ಇತರ ದಾಖಲಾತಿಗಳೊಂದಿಗೆ ಜು.24ರ ಒಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಭೇಟಿ ಮಾಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net