ಕೂರಗುಂದ ಅರಣ್ಯ ಪ್ರದೇಶದಲ್ಲಿ ಬೆಂಕಿ

25 Kuragunda Fire C
Published on

ಹಾವೇರಿ: ತಾಲೂಕಿನ ಕೂರಗುಂದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿ ಅರಣ್ಯ ಪ್ರದೇಶಕ್ಕೆ ವ್ಯಾಪಿಸಿದ ಘಟನೆ ಸೋಮವಾರ ನಡೆದಿದೆ.

ಕೂರಗುಂದ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಬಿಸಿಲಿನ ಧಗೆಗೆ ಬೆಂಕಿಯ ವ್ಯಾಪ್ತಿ ಎಲ್ಲೆಡೆ ವ್ಯಾಪಿಸಿಕೊಳ್ಳುತ್ತಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದರು.

ಸುಮಾರು ನಾಲ್ಕು ಎಕರೆ ಪ್ರದೇಶದ ಹುಲ್ಲುಗಾವಲು ಪ್ರದೇಶ ಸುಟ್ಟಿದೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಅರಣ್ಯದಲ್ಲಿ ಬೆಂಕಿ ಹೊತ್ತಿಕೊಳ್ಳದಂತೆ ಗಮನಿಸಲು ಅರಣ್ಯ ಸಿಬ್ಬಂದಿ ನೇಮಿಸಲಾಗಿದೆ ಎಂದು ಆರ್‌ಎಫ್‌ಒ ನದಾಫ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net