ಹಾವೇರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಹಾವೇರಿ ವತಿಯಿಂದ ಗಿರಿಜನ ಉಪ ಯೋಜನೆ ಅಡಿಯಲ್ಲಿ ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸದರಿ ಫಲಾನುಭವಿಗಳು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರುವ ಪರಿಶಿಷ್ಟ ಪಂಗಡದ 18ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರಿಂದ (ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರಿಂದ) ಅರ್ಜಿ ಸಲ್ಲಿಸಬಹುದು.
ಆಸಕ್ತ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಹಾಗೂ ಹತ್ತಿರದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಇವರಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಡಿ.13ರ ಸಂಜೆ 5 ಗಂಟೆಯ ಒಳಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ ಹಾವೇರಿ ಇಲ್ಲಿಗೆ ಸಲ್ಲಿಸಬೇಕು ಎಂದು ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.