ಚಿಗುರು ಕಾರ್ಯಕ್ರಮ ನ.25ರಂದು

Published on

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುರುಬಗೊಂಡ ಮೃತ್ಯುಂಜಯ ಪ್ರೌಢಶಾಲೆ ಸಹಯೋಗದಲ್ಲಿ ಕರ್ನಾಟಕ ಸಂಭ್ರಮ-50 ಚಿಗುರು ಕಾರ್ಯಕ್ರಮ ನ.25ರಂದು ಬೆಳಗ್ಗೆ 11 ಗಂಟೆಗೆ ಕುರುಬಗೊಂಡ ಮೃತ್ಯುಂಜಯ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.
ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಲಿದ್ದು, ಕುರುಬಗೊಂಡ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಕುಳ್ಳಿನಿಂಬಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ. ಉಪಾಧ್ಯಕ್ಷೆ ಸುಧಾ ನಿಂಗನಗೌಡ ಪಾಟೀಲ, ಮಹಾಂತಸ್ವಾಮಿ ವಿದ್ಯಾಪೀಠದ ಅಧ್ಯಕ್ಷ ಎ.ಎಸ್.ಬಸೆಟ್ಟಿಯವರ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net