ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು

Published on

ಹಾವೇರಿ: ಕುಷ್ಠರೋಗ ಶಾಪವಲ್ಲ, ಎಂ.ಡಿ.ಟಿ. ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಿದಬಹುದು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಚನ್ನಬಸಯ್ಯ ವಿರಕ್ತಮಠ ಹೇಳಿದರು.
ಕಾಟೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಯಕ್ರಮ ವಿಭಾಗ, ಹಾವೇರಿ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಕಾಟೇನಹಳ್ಳಿ ಗ್ರಾ.ಪಂ. ಸಹಯೋಗದಲ್ಲಿ ಆಯೋಜಿಸಿದ್ದ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಲ್ಲಿ ಜನವರಿ ಅಂತ್ಯದವರೆಗೆ 24 ಪಿಬಿ ಹಾಗೂ 59 ಎಂಬಿ ಸೇರಿ 83 ಪ್ರಕರಣಗಳನ್ನು ಪತ್ತೆಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಕುಷ್ಠರೋಗಿಗಳು ಆರೋಗ್ಯ ಇಲಾಖೆ ಸೌಲಭ್ಯ ಪಡೆದುಕೊಂಡು ಗುಣಮುಖರಾಗಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net