ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹೊಸಮಠದ ಶ್ರೀ ಬಸವೇಶ್ವರ ಬಿ.ಇ.ಡಿ.ಕಾಲೇಜ್ ಸಹಯೋಗದಲ್ಲಿ ಜ.2ರಂದು ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಜರುಗಲಿದೆ.
ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಇಜಾರಿಲಕಮಾಪುರ ಬಾಲಕಿಯರ ಪದವಿ ಪೂರ್ವ ಕಾಲೇಜ್‌ನ ಉಪನ್ಯಾಸಕ ಶೇಖರ ಭಜಂತ್ರಿ ಉಪನ್ಯಾಸ ನೀಡಲಿದ್ದಾರೆ.