

ಹಾವೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಉಚಿತ ಸ್ಕೂಲ್ ಕಿಟ್ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ (ಫಲಾನುಭವಿಯ ಗುರುತಿನ ಚೀಟಿ, ಫಲಾನುಭವಿಯ ಆಧಾರ್ ಕಾರ್ಡ್, ವಿಧ್ಯಾರ್ಥಿಯ ಆಧಾರ್ ಕಾರ್ಡ್ ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಬಗ್ಗೆ ಮೂಲ ಶಾಲಾ ವ್ಯಾಸಂಗ ಪ್ರಮಾಣ ಪತ್ರ) ಸೆ.30ರ ಒಳಗಾಗಿ ಫಲಾನುಭವಿಯು ನೋಂದಣಿಯಾಗಿರುವ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಅರ್ಜಿಗಳು ಬಂದಲ್ಲಿ ನೋಂದಣಿ ಜೇಷ್ಠತೆಯ ಆಧಾರದ ಮೇಲೆ ಸ್ಕೂಲ್‌ಕಿಟ್‌ಗಳನ್ನು ವಿತರಿಸಲಾಗುವುದು.
ದಾಖಲೆಗಳು ತಿದ್ದುಪಡಿಯಾಗಿರುವುದು ಕಂಡುಬಂದರೆ, ಅಂತಹ ಕಾರ್ಮಿಕ ಕಾರ್ಡ್‌ಗಳನ್ನು ರದ್ದುಪಡಿಸಲಾಗುವುದು ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.