ಕಾರ್ಮಿಕ ಸಚಿವ ಲಾಡ್ ಜಿಲ್ಲಾ ಪ್ರವಾಸ

Published on

ಹಾವೇರಿ: ಕಾರ್ಮಿಕ ಸಚಿವ ಸಂತೋಷ ಲಾಡ್ ನ.5ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಹಿರೇಕೆರೂರಗೆ ಆಗಮಸಿ ನೂತನ ಕಾರ್ಮಿಕ ಸಮುದಾಯ ಭವನ ಕಟ್ಟಡದ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ರಿಂದ 1.30ರವರೆಗೆ ಹಾವೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.30ಕ್ಕೆ ನಗರದ ನಿರೀಕ್ಷಣಾ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 3ರಿಂದ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಲೀಕ ವರ್ಗದ ಸಂಘಟನೆಗಳ, ಕಾರ್ಮಿಕ ವರ್ಗದ ಸಂಘಟನೆಗಳ ಮುಖಂಡರ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net