

ಹಾವೇರಿ: ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪ್ರಸಕ್ತ 2024-25ನೇ ಸಾಲಿನಲ್ಲಿ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ (01.04.2024ರ ಬಳಿಕ) ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಫಲಾನುಭವಿಗಳಿಗೆ ಗರಿಷ್ಠ 65,000 ರೂ. ಸಾಲದ ಮೊತ್ತಕ್ಕೆ ಶೇ.6.0ರಷ್ಟು ಬಡ್ಡಿ ಸಹಾಯಧನ (3,625 ರೂ.) ನೀಡುವ ಯೋಜನೆ ಇದಾಗಿದೆ. ಈ ಕಾರ್ಯಕ್ರಮವನ್ನು ವಾಣಿಜ್ಯ ಬ್ಯಾಂಕ್‌ಗಳ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತ ಮಹಿಳೆಯರು ಇದರ ಸದುಪಯೋಗವನ್ನು ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಪಶು ಆಸ್ಪತ್ರೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಪ್ರಕಟಣೆ ಮೂಲಕ ರೈತರಲ್ಲಿ ಮನವಿ ಮಾಡಿದ್ದಾರೆ.