ಹಾವೇರಿ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಹುಕ್ಕೇರಿ ಮಠದ ಆವರಣದಲ್ಲಿ ಫೆ.22ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಅಂದತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಕಂಚಿಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಹಾಗೂ ಮುತ್ತೂಟ್ ಪಿನ್‌ಕಾರ್ಪ್ ಲಿಮಿಟೆಡ್ ಮತ್ತು ಶ್ರೀ ಹುಕ್ಕೇರಿಮಠದ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡಜನರಿಗೆ ಮಾತ್ರ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಹಮ್ಮಿಕೊಂಡಿದೆ. ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗೆ ಅರ್ಹರಾದವರನ್ನು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆಯವರು ಉಚಿತ ಸಾರಿಗೆ ಮತ್ತು ಊಟದ ವ್ಯವಸ್ಥೆಯೊಂದಿಗೆ ಶಸ್ತ್ರಚಿಕಿತ್ಸೆ ಹಾಗೂ ಲೆನ್ಸ್‌ಗಳನ್ನು ಅಳವಡಿಸುತ್ತಾರೆ.
ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಎರಡು ಪೋಟೋ, ರೇಶನ್ ಕಾರ್ಡ್ ಅಥವಾ ಓಟರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ತರಬೇಕು. ಮನೆಯಿಂದ ಬರುವಾಗ ಒಬ್ಬ ಸಹಾಯಕರನ್ನು ಕರೆತರಬೇಕು. ಶಸ್ತ್ರಚಿಕಿತ್ಸೆ ಆದವರಿಗೆ ರಿಯಾಯ್ತಿ ದರದಲ್ಲಿ ಕನ್ನಡಕ ವಿತರಿಸಲಾಗುವುದು. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸುಭಾಸ ಹುಲ್ಯಾಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.