ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಜು.27ರಂದು

Published on

ಹಾವೇರಿ: ಲಯನ್ಸ್ ಕ್ಲಬ್, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ಜು.27ರಂದು ನಗರದ ಸ್ಟೇಶನ್ ರಸ್ತೆಯ ನಮ್ಮ ಕ್ಲಿನಿಕ್‌ನಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಶಿಬಿರ ಬೆಳಗ್ಗೆ 9 ಗಂಟೆಯಿಂದ 1 ಗಂಟೆವರೆಗೆ ನಡೆಯಲಿದೆ. ಆಸಕ್ತರು ಕಡ್ಡಾಯವಾಗಿ 2 ಪಾಸ್‌ಪೋರ್ಟ್ ಸೈಜ್ ಫೋಟೋದೊಂದಿಗೆ ಆಧಾರ್ ಕಾರ್ಡ್, ರೇಶನ್ ಕಾರ್ಡ್ ಅಥವಾ ವೋಟರ್ ಕಾರ್ಡ್‌ಗಳ ಝರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಜಿಲ್ಲೆಯ ನಾಗರಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net