ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಪ್ರಕಟ; ನಗರಸಭೆ, ಪುರಸಭೆ, ಪ.ಪಂ.ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Haveri Nagarasabhe 2
Published on

ಹಾವೇರಿ: ಕಳೆದ ಒಂದೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಸೋಮವಾರ ಪ್ರಕಟಿಸಿದ್ದು, ಜಿಲ್ಲೆಯ ಸ್ಥಳೀಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಹಾವೇರಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ. ರಾಣೆಬೆನ್ನೂರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ.
ಬಂಕಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ, ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಅಭ್ಯರ್ಥಿ, ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮಹಿಳಾ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ. ಸವಣೂರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ.
ಹಿರೇಕೆರೂರ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ. ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾದು ಕುಳಿತಿದ್ದ ಹಲವರು ಇದೀಗ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ನಾಯಕರ ಮನೆಯತ್ತ ಎಡತಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net