ಕರ್ನಾಟಕ ಸಂಭ್ರಮ ಲಾಂಛನ ಮಾದರಿಗಳ ಆಹ್ವಾನ

Published on

ಹಾವೇರಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಆಯೋಜಿಸುವ ವೈವಿಧ್ಯಮ ಕಾರ್ಯಕ್ರಮಗಳಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ವಿಶಿಷ್ಟವಾದ ಲಾಂಛನಗಳನ್ನು ಬಳಸಲು ಆಸಕ್ತರಿಂದ ಸುಂದರವಾದ ಲಾಂಛನ ಮಾದರಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಸಂಭ್ರಮ 50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮವಾಗಿ ಆಚರಿಸುವ ಮೂಲಕ ವಿಶೇಷ ಮೆರುಗು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ. ಈ ಕಾರ್ಯಕ್ರಮದಲ್ಲಿ ಬಳಸಲು ಆಯ್ಕೆಯಾದ ಮಾದರಿ ಲಾಂಛನಕ್ಕೆ 25 ಸಾವಿರ ರೂ. ಬಹುಮಾನ ನಿಗದಿಪಡಿಸಲಾಗಿದೆ.
ಆಸಕ್ತರು ಲಾಂಛನ ಮಾದರಿಯನ್ನು ಸೆ.30ರೊಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಠಿಠಿ://ಚ್ಞ್ಞಜ್ಟಿಜಿ.ಚ್ಟ್ಞಠಿ.ಜಟ.ಜ್ಞಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net