ಲೋಕಾಯುಕ್ತ ಸಭೆ 12ರಂದು

Published on

ಹಾವೇರಿ: ಜಿಲ್ಲೆಯ ಸವಣೂರ ತಹಸೀಲ್ದಾರ್ ಕಾರ್ಯಾಲಯದಲ್ಲಿ ನ.12ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದು ಕೊರತೆಗಳ ಸಭೆ ಆಯೋಜಿಸಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ, ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಭ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿಗಳಿಕೆ, ಸರ್ಕಾರಿ ಹಣ ದುರುಪಯೋಗ, ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿ, ನೌಕರರಿಂದ ಲಂಚ ಕೇಳುವ ದೂರುಗಳಿದ್ದರೆ ಲೋಕಾಯುಕ್ತ ನಡೆಸುವ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ದೂರುಗಳನ್ನು ಸಲ್ಲಿಸಬಹುದು.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ದೂರುಗಳನ್ನು ಸ್ವೀಕರಿಸುವುದಿಲ್ಲ. ಸಭೆಯ ನಂತರ ವಿವಿಧ ಇಲಾಖೆಯ ಕಚೇರಿಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಕರ್ನಾಟಕ ಲೋಕಾಯುಕ್ತ ಡಿಎಸ್‌ಪಿ ಮಧುಸೂದನ, ಪೊಲೀಸ್ ನಿರೀಕ್ಷಕರಾದ ದಾದಾವಲಿ ಕೆ.ಎಚ್., ಪಿ.ವಿ.ಸಾಲಿಮಠ ಹಾಗೂ ವಿಶ್ವನಾಥ ಕಬ್ಬೂರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net