ಸಂಸದ ಬೊಮ್ಮಾಯಿಗೆ ಮಾದಿಗ ಸಮಾಜದದಿಂದ ಸನ್ಮಾನ ಜೂ.21ರಂದು

Published on

ಹಾವೇರಿ: ನೂತನ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಜೂ.21ರಂದು ಬೆಳಗ್ಗೆ 11 ಗಂಟೆಗೆ ಅಶೋಕ ಹೋಟೆಲ್‌ನ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ, ಮನೋಹರ ತಹಶೀಲ್ದಾರ, ಮಾಜಿ ಶಾಸಕಾರದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಪ್ರಮುಖರಾದ ಎಂ.ಎಸ್.ಕೊರಿಶೆಟ್ಟರ್, ಪರಮೇಶ್ವರಪ್ಪ ಮೇಗಳಮನಿ, ಡಾ.ಮಲ್ಲೇಶಪ್ಪ ಹರಿಜನ, ಚಂದ್ರಪ್ಪ ಹರಿಜನ, ಪ್ರಕಾಶ ಪೂಜಾರ, ಸುರೇಶ ಆಸಾದಿ, ಇತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಸಮಾಜ ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net