ಹಾವೇರಿ: ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ಜ.21ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.