ಮಡಿವಾಳ ಸಮಾಜದಿಂದ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Published on

ಹಾವೇರಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು- ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಡಿವಾಳ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಮೇಲ್ಕಂಡ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಬೆಂಗಳೂರು -ಒನ್, ಕರ್ನಾಟಕ ಒನ್, ಅಟಲ್ -ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ನ.3ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kmmd.karnataka.gov.in ನಲ್ಲಿ ಅಥವಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಸಂಪರ್ಕಿಸಬಹು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net