

ಹಾವೇರಿ: ಕುಲಗುರು ಶ್ರೀ ಮಡಿವಾಳ ಮಾಚಿದೇವರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ. ಇಂದಿನ ಯುವ ಸಮೂಹ ಅವರ ಜೀವನದ ಕುರಿತು ತಿಳಿದುಕೊಳ್ಳಬೇಕು ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಟಿ.ಎಂ.ಎ.ಇ.ಎಸ್. ಬಿ.ಇಡಿ. ಕಾಲೇಜ್ ಹಾಗೂ ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕುಲಗುರು ಶ್ರೀ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ಪ್ರಾಚಾರ್ಯ ಪ್ರೊ.ಬಿ.ಎಸ್.ಯಾವಗಲ್ ಮಾಚಿದೇವರ ಜೀವನದ ಕುರಿತು ಉಪನ್ಯಾಸ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜು ಸಾತೇನಹಳ್ಳಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೆಸಿಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ.ಮೈದೂರ, ಉಪ ವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ತಹಸೀಲ್ದಾರ ಶರಣಮ್ಮ, ಆರ್.ವಿ.ಚಿನ್ನಿಕಟ್ಟಿ, ಪ್ರಾಚಾರ್ಯ ಡಾ.ಬಸನಗೌಡ್ರ, ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಮಡಿವಾಳರ, ಮಾಚಿದೇವ ಯುವ ಬ್ರಿಗೇಡ್‌ನ ಜಿಲ್ಲಾಧ್ಯಕ್ಷ ಸತೀಶ ಮಡಿವಾಳರ, ಇತರರು ಉಪಸ್ಥಿತರಿದ್ದರು.