ಹಾವೇರಿ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳ್ಗೆಗಾಗಿ ಶ್ರಮಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 35 ವರ್ಷದೊಳಗಿನ ಅರ್ಹರು ಅರ್ಜಿ ಸಲ್ಲಿಸಬಹುದು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಪರಿಶಿಷ್ಟ ವರ್ಗಗಳ ಜಿಲ್ಲಾ ಕಚೇರಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ತಮ್ಮ ಸ್ವ-ವಿವರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬೇಕು. ಸೆ.30ರೊಳಗಾಗಿ ನೇರವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾಡಳಿತ ಭವನ, ಸಿ ಬ್ಲಾಕ್ ರೂಮ್ ನಂಬರ್ 38 ದೇವಗಿರಿ, ಹಾವೇರಿ ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.