

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ/ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಅ.7ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.
ವೇದಿಕೆ ಸಮಾರಂಭಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ, ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ಥಳೀಯ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ. 2020ನೇ ಸಾಲಿನ ಪರಿಸರ ಪತ್ರಿಕೋದ್ಯಮ ರಾಜ್ಯ ಪ್ರಶಸ್ತಿ ವಿಜೇತ ಪತ್ರಕರ್ತ ಮಾಲತೇಶ ಅಂಗೂರ ಉನ್ಯಾಸಕರಾಗಿ ಭಾಗವಹಿಸಲಿದ್ದು, ನಂತರ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.