ಮಾನವ ಹಕ್ಕುಗಳ ಆಯೋಗದಿಂದ ಅಹವಾಲು ಸ್ವೀಕಾರ 8ರಂದು

Published on

ಹಾವೇರಿ: ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಸಾರ್ವಜನಿಕರಿಂದ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾ ಜಿಲ್ಲೆಗಳಲ್ಲಿ ಇತ್ಯರ್ಥಪಡಿಸಿ ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಆಯೋಗದ ಹಂಗಾಮಿ ಅಧ್ಯಕ್ಷ ಹಾಗೂ ಸದಸ್ಯರನ್ನು ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ(ಪ್ರ) ಎ.ದಿನೇಶ ಸಂಪತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net