ಕೌಶಲಾಧಾರಿತ ತರಬೇತಿ ಪಡೆದು ಸ್ವಾವಲಂಬಿಯಾಗಿ

19 HVR 4
Published on

ಹಾವೇರಿ: ಸ್ವ-ಸಹಾಯ ಸಂಘಗಳು ಕೌಶಲಾಧಾರಿತ ತರಬೇತಿ ಪಡೆದುಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಬೇಕೆಂದು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ಹೇಳಿದರು.
ತಾಲೂಕಿನ ಬೆಳವಿಗಿ ಉಪಜಲಾನಯನ ಪ್ರದೇಶ ವ್ಯಾಪ್ತಿಯ ಮರೋಳ ಗ್ರಾಮದಲ್ಲಿ ಇತ್ತೀಚೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೌಶಲಾಧಾರಿತ ಉದ್ಯಮಶೀಲತಾ ತರಬೇತಿ (ಹೊಲಿಗೆ ತರಬೇತಿ) ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮರೋಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಬಣಕಾರ ಮಾತನಾಡಿ, ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮರೋಳ ಗ್ರಾಮ ಪಂಚಾಯಿತಿಯ ಸದಸ್ಯರು, ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ರೈತ ಮಹಿಳೆಯರು ಪಾಲ್ಗೊಂಡಿದ್ದರು. ನಾಗೇಂದ್ರಪ್ಪ ಜಿ. ನಿರೂಪಿಸಿದರು, ಫಕ್ಕೀರೇಶ ದೇವಿಹೊಸೂರ ಸ್ವಾಗತಿಸಿದರು. ಗುತ್ತಲ ಹೋಬಳಿಯ ಕೃಷಿ ಅಧಿಕಾರಿ ಪುಟ್ಟರಾಜ ಹಾವನೂರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net