ಮಾನಸಿಕ ರೋಗಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ; ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್. ಸಲಹೆ; ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಿಮಿತ್ತ ವಾಕಥಾನ್

10 HVR 9 A
Published on

ಹಾವೇರಿ: ಮಾನಸಿಕ ರೋಗಿಗಳನ್ನು ಹುಚ್ಚ ಎಂದು ಕರೆಯಬಾರದು ಹಾಗೂ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರಪ್ಪ ಎನ್. ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಿಮಿತ್ತ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದಾಗಿದೆ. ನಾವೆಲ್ಲರೂ ಜವಾಬ್ದಾರಿಯುತ ಪ್ರಜೆಗಳಾಗಿದ್ದು, ಸಮಾಜದ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಪ್ರವೀಣಕುಮಾರ ಎಂ.ವಿ., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ನೀಲೇಶ ಎನ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸರಿತಾ, ಡಾ.ಚನ್ನಬಸಯ್ಯ ವಿರಕ್ತಮಠ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯೆ ಡಾ.ಶೃತಿ ಎ, ಸರ್ಕಾರಿ ಸುಶ್ರೂಷಾ ಕಾಲೇಜ್ ಪ್ರಾಂಶುಪಾಲ ಸರಸ್ವತಿ ವೈ.ಎಚ್., ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಉಮೇಶ ಕರಮುಡಿ, ಅಬಕಾರಿ ಇಲಾಖೆ ಅಧಿಕಾರಿ ಬಸವರಾಜ ಎಚ್. ಮಾದರ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net