ತ್ರೈಮಾಸಿಕ ಕೆಡಿಪಿ ಸಭೆ 7ರಂದು

Published on

ಹಾವೇರಿ: ಪ್ರಸಕ್ತ ಸಾಲಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೈಮಾಸಿಕ ಕೆಡಿಪಿ ಸಭೆ ನ.7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net