ಇಂಧನ ಸಚಿವ ಕೆ.ಜೆ ಜಾರ್ಜ್ ಪ್ರವಾಸ ಫೆ.17ರಂದು

KJ George
Published on

ಹಾವೇರಿ: ಇಂಧನ ಸಚಿವ ಕೆ.ಜೆ ಜಾರ್ಜ್ ಫೆ.17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10.45ಕ್ಕೆ ಶಿಗ್ಗಾಂವಿ ತಾಲೂಕು ಹುಲಗೂರ ಗ್ರಾಮದ ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ ಅವರ ನಿವಾಸಕ್ಕೆ ಆಗಮಿಸುವರು. ಬೆಳಗ್ಗೆ 11.40ಕ್ಕೆ ಹಾವೇರಿ ಪಕ್ಷದ ಕಚೇರಿಗೆ ಭೇಟಿ ನೀಡುವರು.

ಮಧ್ಯಾಹ್ನ 12.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಹಾವೇರಿ ತಾಲೂಕು ಕುಳೇನೂರ ಗ್ರಾಮದಲ್ಲಿ 110 ಕೆ.ವಿ.ವಿದ್ಯುತ್ ಕೇಂದ್ರದ ಉದ್ಘಾಟನೆ ಹಾಗೂ ಮಧ್ಯಾಹ್ನ 3.45ಕ್ಕೆ ಬ್ಯಾಡಗಿ ತಾಲೂಕು ಚಿಕ್ಕಬಾಸೂರ ಗ್ರಾಮದಲ್ಲಿ 110 ಕೆ.ವಿ. ಸಾಮರ್ಥ್ಯದ ವಿದ್ಯುತ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net