ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು; ಸಚಿವ ಸತೀಶ ಜಾರಕಿಹೊಳಿ ಹೇಳಿಕೆ

Published on

ಹಾವೇರಿ:: ಬಿಜೆಪಿಯವರು 10 ವರ್ಷದಲ್ಲಿ ಕೇವಲ ಧರ್ಮ, ಮಂದಿರದ ಮೇಲೆ ರಾಜಕೀಯ ಮಾಡಿದರು. ನಾವು ಅಭಿವೃದ್ಧಿಯ ಮೇಲೆ ಜನರ ಬಳಿ ಮತ ಕೇಳುತ್ತಿದ್ದೇವೆ. ಸಂವಿಧಾನ ಉಳಿಯಬೇಕು ಅಂದರೆ ಕಾಂಗ್ರೆಸ್ ಗೆಲ್ಲಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಗ್ಯಾರಂಟಿ ಯಾವುದೇ ಜಾತಿ ಧರ್ಮ ನೋಡಿಲ್ಲ. ಎಲ್ಲರನ್ನೂ ಸಮಾನವಾಗಿ ಕಂಡಿದ್ದಾರೆ. ಇದು ಕೇವಲ ಚುನಾವಣೆ ಅಲ್ಲ. ದೇಶ ಉಳಿಸುವ ಚುನಾವಣೆ. ಇಲ್ಲ ಅಂದರೆ ಸರ್ವಾಧಿಕಾರಿಗಳ ಕೈಯಲ್ಲಿ ಅಧಿಕಾರ ಸಾಗುತ್ತದೆ. ಬಿಜೆಪಿಯವರು ಸಂವಿಧಾನದಲ್ಲಿರುವ ಮೀಸಲಾತಿ ತೆಗೆದು ಹಾಕುತ್ತೇವೆ ಅಂತಾರೆ. ಯುವಕ ಆನಂದಸ್ವಾಮಿ ಬೆಂಬಲಿಸಿ ಎಂದು ಮನವಿ ಮಾಡಿದರು.
ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹಿಂದೆ ಹಲವು ಪ್ರಕರಣಗಳನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net