

ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೆ.5ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಜಿಲ್ಲಾ ಗುರುಭವನದಲ್ಲಿ ಆಯೋಜಿಸಿರುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.