ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಂತಾಪ

Published on

ಹಾವೇರಿ: ಯಲ್ಲಾಪುರ ಸಮೀಪದ ಅರಬೈಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಜಿಲ್ಲೆ ಸವಣೂರ ಪಟ್ಟಣದ ಹತ್ತು ಜನ ಮೃತಪಟ್ಟಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಮೃತರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಗೊಂಡವರಗೆ ಸೂಕ್ತ ಚಿಕಿತ್ಸೆ ನೀಡಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ. ಮೃತರ ಕುಟುಂಬದವರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಚಿವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net