ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲರ ಪ್ರವಾಸ ಇಂದು

Shivanand Patil
Published on

ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಆ.5ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಹಾವೇರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬ್ಯಾಡಗಿಯಲ್ಲಿ ನಡೆಯಲಿರುವ ಗೃಹಜ್ಯೋತಿ ಯೋಜನೆಯ ಅನುಷ್ಠಾನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬ್ಯಾಡಗಿ ಎಪಿಎಂಸಿ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹನುಮನಮಟ್ಟಿಯ ಟೆಕ್ಸಟೈಲ್ ಪಾರ್ಕ್ ವೀಕ್ಷಿಸಲಿದ್ದಾರೆ. ಸಂಜೆ 4.15ಕ್ಕೆ ರಾಣೇಬೆನ್ನೂರಿನ ಮೆಗಾ ಮಾರುಕಟ್ಟೆ ಪರಿಶೀಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net