

ಹಾವೇರಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜ.4 ಮತ್ತು 5ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜ.4ರಂದು ಬೆಳಗ್ಗೆ 10.15ಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ರೈತರೊಂದಿಗೆ ಸಭೆ ನಡೆಸಲಿದ್ದಾರೆ. ಬೆ.11 ಗಂಟೆಗೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಅಕ್ಕ ಕ್ಯಾಂಟಿನ್ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11.10ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜ.5ರಂದು ಬೆಳಗ್ಗೆ 9.45ಕ್ಕೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೋಳ, ಬ್ಯಾಡ್ಮಿಂಟನ್ ಆವರಣ ಉದ್ಘಾಟಿಸುವರು. ಬೆಳಗ್ಗೆ 10.20ಕ್ಕೆ ಹಾವೇರಿ ತಹಸೀಲ್ದಾರ್ ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಅಭಿಲೇಖಾಲಯದಲ್ಲಿನ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 10.40ಕ್ಕೆ ನಾಗೇಂದ್ರನಮಟ್ಟಿಯಲ್ಲಿ ನಗರೋತ್ಥಾನ ಹಂತ-4ರ ಕಾಮಗಾರಿಗೆ ಹಾಗೂ ಭೂವೀರಾಪುರ ಗ್ರಾಮದಲ್ಲಿ ಎಸ್‌ಟಿಪಿ ನಿರ್ಮಾಣ ಭೂಮಿ ಪೂಜೆ ನೆರವೇರಿಸುವರು. ಮಧ್ಯಾಹ್ನ 12 ಗಂಟೆಗೆ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಹಾವೇರಿ ಘಟಕದಿಂದ ನೂತನ ಬಸ್‌ಗಳು ಹಾಗೂ ನೂತನ ಮಾರ್ಗಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಗುರುಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.