‘ಎಂಎಲ್‌ಎ, ಎಂಪಿ ಕಾಣೆಯಾಗಿದ್ದಾರೆ’; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

17 HVR 7 New
Published on

ಹಾವೇರಿ: ಜಿಲ್ಲಾಕೇಂದ್ರ ಹಾವೇರಿಯಲ್ಲಿ ಅತಿಯಾದ ಮಳೆ ಸುರಿಯುತ್ತಿದ್ದರೂ ಸ್ಥಳೀಯ ಶಾಸಕ ರುದ್ರಪ್ಪ ಲಮಾಣಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಇತ್ತ ಸುಳಿಯದೇ ಕಾಣೆಯಾಗಿದ್ದಾರೆ ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕಳೆದ ಒಂದು ವಾರದಿಂದ ಹಾವೇರಿ ನಗರದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಬಾಲಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಇಂತಹ ಸಂದರ್ಭದಲ್ಲಿ ‘ಈ ಮಹಾನುಭಾವರು ಕಾಣೆಯಾಗಿದ್ದಾರೆ’ ಎಂದು ಬೊಮ್ಮಾಯಿ ಹಾಗೂ ಲಮಾಣಿ ಫೋಟೋವನ್ನು ನೆಟ್ಟಿಗರು ವೈರಲ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net