

ಹಾವೇರಿ: ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಗಾಂಧಿ ಭವನಕ್ಕೆ ಶುಕ್ರವಾರ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಂಧಿ ಭವನ ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಿರೇಕೆರೂರ ಕ್ಷೇತ್ರದ ಶಾಸಕ ಯು.ಬಿ.ಬಣಕಾರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ, ಇತರರು ಇದ್ದರು.