ಜಿಲ್ಲೆಯಲ್ಲಿ ವಿವಿಧೆಡೆ ಸುರಿದ ಮಳೆ; ಮೋಡ ಬಿತ್ತನೆಯೋ, ಸ್ವಾಭಾವಿಕವೋ ?

5 HVR 11
Published on

ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ, ರಟ್ಟಿಹಳ್ಳಿ, ಹಾನಗಲ್ಲ, ಹಿರೇಕೆರೂರ, ಬ್ಯಾಡಗಿ, ಸವಣೂರ, ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಕೆಲಕಾಲ ಮಳೆ ಸುರಿದ ವರದಿಯಾಗಿದೆ.
ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತೆ ಈ ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಈ ಮೊದಲೇ ಮುನ್ಸೂಚನೆ ನೀಡಿತ್ತು. ಈ ನಡುವೆಯೇ ರಾಣೆಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ ಅವರು ವಿಶೇಷ ಮುತುವರ್ಜಿ ವಹಿಸಿ ಸೋಮವಾರ ಮೋಡ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಮಂಗಳವಾರವೂ ಮೋಡ ಬಿತ್ತನೆ ಮಾಡಲಾಗಿದ್ದು, ಅಲ್ಲಲ್ಲಿ ಉತ್ತಮ ಮಳೆ ಸುರಿದಿದೆ ಎಂದು ಕೋಳಿವಾಡ ತಿಳಿಸಿದ್ದಾರೆ.
ಆದರೆ, ಜಿಲ್ಲೆಯಲ್ಲಿ ಭಾನುವಾರದಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಹಲವೆಡೆ ಉತ್ತಮ ಮಳೆಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ, ಮಂಗಳವಾರ ಸುರಿದ ಮಳೆ ಮೋಡ ಬಿತ್ತನೆಯಿಂದಲೋ ಅಥವಾ ಸ್ವಾಭಾವಿಕವೋ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಪ್ರಶ್ನೆಗೆ ಶಾಸಕರು, ವಿಜ್ಞಾನಿಗಳು ದಾಖಲೆಗಳೊಂದಿಗೆ ಖಚಿತ ಉತ್ತರ ನೀಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net