ಸೆ.4ರಿಂದ ಹಾವೇರಿ ಜಿಲ್ಲೆಯಲ್ಲಿ ಮೋಡಬಿತ್ತನೆ

Published on

ರಾಣೇಬೆನ್ನೂರ: ಹಾವೇರಿ ಜಿಲ್ಲೆಯಲ್ಲಿ ಸೆ.4ರಿಂದ ಮೂರು ದಿನಗಳ ಕಾಲ ಮೋಡಬಿತ್ತನೆ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
ನಮ್ಮ ಪಿಕೆಕೆ (ಪಕ್ಷಾತೀತ ಕಾಯಕದ ಕನಸು) ಸಂಸ್ಥೆಯ ವತಿಯಿಂದ ಮೋಡಬಿತ್ತನೆ ಮಾಡಲಾಗುತ್ತಿದೆ. ಸೆ.4ರಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ವಿಮಾನ ಹೊರಡಲಿದೆ. ವಿಮಾನ ಮೂರು ದಿನಗಳ ಕಾಲ ಸ್ಥಳೀಯವಾಗಿದ್ದು, ಎಲ್ಲಲ್ಲಿ ಮೋಡಬಿತ್ತನೆ ಮಾಡಲು ಮೋಡಗಳು ಸಿಗುತ್ತವೆ ಅಲ್ಲಲ್ಲಿ ಮೋಡಬಿತ್ತನೆ ಮಾಡಲಿದೆ. ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಈಗಾಗಲೇ ಮೋಡಬಿತ್ತನೆ ಮಾಡಲು ಜಿಲ್ಲಾಧಿಕಾರಿ ಹಾಗೂ ಕೇಂದ್ರದಿಂದ ಪರವಾನಗಿ ಪಡೆದುಕೊಳ್ಳಲಾಗಿದೆ. ಮೋಡಬಿತ್ತನೆ ಮಾಡುವ ವಿಮಾನದಲ್ಲಿ ನುರಿತ ಪೈಲೆಟ್ ಸೇರಿದಂತೆ ಒಟ್ಟು 8 ಜನರ ತಂಡ ಕೆಲಸ ಮಾಡಲಿದೆ ಎಂದರು.
ಮೋಡಬಿತ್ತನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಸಚಿವರಾದ ಶಿವಾನಂದ ಪಾಟೀಲ, ಎಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಸಂತೋಷ ಲಾಡ್, ಜಿಲ್ಲೆಯ ಎಲ್ಲ ತಾಲೂಕಿನ ಶಾಸಕರು ಹಾಗೂ ಧಾರವಾಡ ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net