ಬ್ಯಾಡಗಿ: ಶ್ರಾವಣ ಮಾಸದ ಕೊನೆಯ ಶನಿವಾರ ಬ್ಯಾಡಗಿ ತಾಲೂಕು ಮೋಟೆಬೆನ್ನೂರ ಗ್ರಾಮದ ಹೊರ ವಲಯದಲ್ಲಿರುವ ಶ್ರೀ ಕೋಟೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿಸಲಾಯಿತು. ನೂರಾರು ಭಕ್ತರು ಆಗಮಿಸಿ ಆಂಜನೇಯನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾದರು.