ಹಾವೇರಿ: ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೆ.26ರಂದು ಬೆಳಗ್ಗೆ 12.30ಕ್ಕೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಬ್ಯಾಂಕುಗಳ ಸಲಹಾ ಸಮಿತಿ ಸಭೆ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆ ನಡೆಯಲಿದೆ. ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಜಿಪಂ ಸಿಇಒ, ಮತ್ತಿತರ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.