ವರದಾ-ಬೇಡ್ತಿ ನದಿ ಜೋಡಣೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ; ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ

Published on

ಹಾವೇರಿ: ವರದಾ- ಬೇಡ್ತಿ ನದಿಗಳ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ದೊರೆತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ನೆಗಳೂರ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾತನಾಡಿದರು. ತುಂಗಭದ್ರಾ ನದಿಯಲ್ಲಿ ಬೇಸಿಗೆಯ 34 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಅದಕ್ಕೆ ವರದಾ-ಬೇಡ್ತಿ ನದಿ ಜೋಡಣೆಯ ಅಗತ್ಯವಿದೆ ಎಂದರು.

ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರ ಈ ಪ್ರಕ್ರಿಯೆನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು. ನನ್ನ ಈ ಆಗ್ರಹವನ್ನು ರಾಜ್ಯ ಸರ್ಕಾರ ಸಹ ಒಪ್ಪಿಕೊಂಡಿದೆ. ಯೋಜನೆ ಜಾರಿಯಾದರೆ ಸುಮಾರು 18 ಟಿಎಂಸಿ ನೀರು ಬರುತ್ತದೆ. ಅದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಜಾರಿಗೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net