ಕಾಂಗ್ರೆಸ್ ಪಕ್ಷದ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ ಮಾ.20ರಂದು

congress logo
Published on

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ ಗಡ್ಡದೇವರಮಠ ಆಯ್ಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಆರ್‌ಟಿಒ ಕಚೇರಿ ಬಳಿಯ ಶ್ರೀ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಮಾ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.
ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಎಚ್.ಕೆ.ಪಾಟೀಲ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಚುನಾಯಿತ ಪ್ರತಿನಿಧಿಗಳು, ಪ್ರಮುಖ ಕಾರ್ಯಕರ್ತರು, ಮತ್ತಿತರರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net