ಮಾಜಿ ಸಿಎಂ ಬೊಮ್ಮಾಯಿ ಗೆಲ್ಲಿಸೋಣ; ಶರಣಬಸವ ಲಾ ಫರ್ಮ್ ಚೇರ್ಮನ್ ಶರಣಬಸವ ಅಂಗಡಿ ಕರೆ

Published on

ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸೋಣ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಶರಣಬಸವ ಲಾ ಫರ್ಮ್ ಚೇರ್ಮನ್ ಶರಣಬಸವ ಅಂಗಡಿ ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕ್ಷೇತ್ರದ ಟಿಕೆಟ್‌ಗಾಗಿ ತಾವು ಹಲವು ತಿಂಗಳಿನಿಂದ ಕ್ಷೇತ್ರದಲ್ಲಿ ಸಂಚರಿಸಿ ಸಂಘಟನೆ ಮಾಡಿದ್ದು, ಬೃಹತ್ ಉದ್ಯೋಗ ಮೇಳದಂಥ ಹಲವು ಜನೋಪಕಾರಿ ಕೆಲಸಗಳನ್ನು ಮಾಡಿದ ತೃಪ್ತಿ ಇದೆ. ಪಕ್ಷದ ರಾಷ್ಟ್ರಮಟ್ಟದ ಪ್ರಮುಖರು ಅಂತಿಮವಾಗಿ ಹಿರಿಯರಾದ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ. ಆದ್ದರಿಂದ, ನಾವೆಲ್ಲರೂ ಒಗ್ಗಟ್ಟಾಗಿ ಬೊಮ್ಮಾಯಿ ಅವರ ಗೆಲುವಿಗಾಗಿ ಶ್ರಮಿಸೋಣ ಎಂದು ಶರಣಬಸವ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net