

ಹಾವೇರಿ: ನನ್ನ ಮಗ ಕಾಂತೇಶ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಂಸದ ಶಿವಕುಮಾರ ಉದಾಸಿಯವರು ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಬಳಿಕ ಹಲವು ಕಾರ್ಯಕರ್ತರಿಂದ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂತೇಶ ಆಕಾಂಕ್ಷಿಯಾಗಿದ್ದಾರೆ. ಅವರಂತೆ ಹಲವರು ಟಿಕೆಟ್ ಕೇಳುತ್ತಿದ್ದಾರೆ. ಆದರೆ, ಆಯ್ಕೆ ವಿಚಾರ ಕೇಂದ್ರದ ನಾಯಕರಿಗೆ ಬಿಟ್ಟದ್ದು ಎಂದು ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.