ಮಕ್ಕಳಿಗೆ ಬದುಕಿನ ಮೌಲ್ಯ ತಿಳಿಸಿ; ಎಂಆರ್‌ಎಂ ಕಾಲೇಜು ವಾರ್ಷಿಕೋತ್ಸವದಲ್ಲಿ ಡಿಡಿಪಿಯು ಡಾ.ಎಚ್.ಉಮೇಶಪ್ಪ ಕಿವಿಮಾತು

12 HVR 7
Published on

ಹಾವೇರಿ: ಪಾಲಕರು ಮಕ್ಕಳ ಮನಸ್ಸು ಅರಿಯಬೇಕು. ತಮ್ಮ ಸಮಯವನ್ನು ಅವರಿಗಾಗಿ ಮೀಸಲಿಟ್ಟು, ಬದುಕಿನ ಮೌಲ್ಯಗಳನ್ನು ಅವರಿಗೆ ತಿಳಿಸಿಕೊಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ ಕಿವಿಮಾತು ಹೇಳಿದರು.
ನಗರದ ಎಂಆರ್‌ಎಂ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇದಕ್ಕೆ ಶಿಕ್ಷಕರು ಹಾಗೂ ಪಾಲಕರು ಮಾರ್ಗದರ್ಶನ ಮಾಡಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಡಾ.ರಾಮ ಮೋಹನ ರಾವ್ ಅಧ್ಯಕ್ಷತೆ ವಹಿಸಿದ್ದರು. ಎಂ.ಶ್ರೀನಿವಾಸಲು, ಇತರರಿದ್ದರು.
ಕಳೆದ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಎಂಆರ್‌ಎಂ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಮತ್ತು ಎಂಬಿಬಿಎಸ್, ಬಿಎಎಂಎಸ್ ಕೋರ್ಸ್‌ಗೆ ಆಯ್ಕೆಯಾದ 13 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net