ಮುಳ್ಳುಸಜ್ಜೆ ಕಳೆ ನಿರ್ವಹಣೆ ಕಾರ್ಯಾಗಾರ ಆಯೋಜಿಸಿ; ಕೃಷಿ ವಿಶ್ವವಿದ್ಯಾಲಯದ ಕುಲಪತಿಯವರಿಗೆ ಕೃಷಿ ಇಲಾಖೆ ಜೆಡಿ ಪತ್ರ

Published on

ಹಾವೇರಿ: ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲೂಕುಗಳಲ್ಲಿ ಕಳೆದ ಐದಾರು ವರ್ಷಗಳಿಂದ ಮೆಕ್ಕೆಜೋಳ ಬೆಳೆಗೆ ಮುಳ್ಳುಸಜ್ಜೆ ಕಳೆ ಕಾಟ ಹೆಚ್ಚಾಗಿದೆ. ಮುಳ್ಳುಸಜ್ಜೆ ಕಳೆ ನಿರ್ವಹಣೆ ಬಗ್ಗೆ ರೈತರ ಜತೆ ಚರ್ಚಿಸಲು ಕೃಷಿ ವಿಜ್ಞಾನಿಗಳೊಂದಿಗೆ ಕಾರ್ಯಾಗಾರ ಆಯೋಜಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.

ಕಳೆ ನಿಯಂತ್ರಣ ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಈ ಕುರಿತು ಕೃಷಿ ವಿವಿಯಿಂದ ಹನುಮನಮಟ್ಟಿಯ ಕರಷಿ ವಿಜ್ಞಾನ ಕೇಂದ್ರದಲ್ಲಿ ರೈರಿಗಾಗಿ ಜಾಗೃತಿ ಕಾರ್ಯಾಗಾರ ಆಯೋಜಿಸುವಂತೆ ಇತ್ತೀಚೆಗೆ ನಡೆದ ಹಿರೇಕೆರೂರ ಕೆಡಿಪಿ ಸಭೆಯಲ್ಲಿ ಶಾಸಕ ಯು.ಬಿ.ಬಣಕಾರ ಹಿರೇಕೆರೂರ ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಜೆಡಿ ಪತ್ರ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net