ತಡ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತ ಆ್ಯಪ್ ಬಿಡುಗಡೆ

Published on

ಹಾವೇರಿ: ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2024-25ನೇ ಸಾಲಿನ ತಡ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ (ನನ್ನ ಬೆಳೆ ನನ್ನ ಹಕ್ಕು) ರೈತರ ಆ್ಯಪ್/ ಪಿಆರ್ (ಖಾಸಗಿ ನಿವಾಸಿಗಳ) ಆ್ಯಪ್ ಬಿಡುಗಡೆ ಮಾಡಲಾಗಿದೆ.
ರೈತರು ಈ ಕೂಡಲೇ ಗೂಗಲ್ ಪ್ಲೇ ಸ್ಟೋರ್‌ನಿಂದ ತಡ ಮುಂಗಾರು ರೈತರ ಬೆಳೆ ಸಮೀಕ್ಷೆ-2024ರ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬೇಕು.
ಈ ಮಾಹಿತಿಯನ್ನು ಬೆಳೆವಿಮೆ, ಬೆಳೆನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಆರ್‌ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಲಾಗಿದೆ.
ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ಅ.15ರೊಳಗೆ ದಾಖಲಿಸುವಂತೆ ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net