ಹಾವೇರಿ ನಗರಸಭೆ ಕಾರ್ಯಾಲಯಕ್ಕೆ ಡಿಸಿ ಭೇಟಿ

21 HVR 5
Published on

ಹಾವೇರಿ: ಹಾವೇರಿ ನಗರಸಭೆ ಕಾರ್ಯಾಲಯಕ್ಕೆ ಶನಿವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಕಚೇರಿಯ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿದರು.
ನಂತರ ಕಚೇರಿಗೆ ಬಂದಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇಗೊಳಿಸಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ನಂತರ ಸರ್ಕಾರಿ ಕನ್ನಡ ಪ್ರೌಢಶಾಲೆಗೆ ಭೇಟಿ ನೀಡಿ, ಕಲಿಕಾ ವ್ಯವಸ್ಥೆ, ಶಾಲೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಮಕ್ಕಳಿಗೆ ಮನಮುಟ್ಟುವಂತೆ ಪಾಠ ಮಾಡಲು ಹಾಗೂ ಫಲಿತಾಂಶ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net