ಹಾವೇರಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಸಹಯೋಗದಲ್ಲಿ ತಾಲೂಕಿನ ನೆಲೋಗಲ್ಲ ಗ್ರಾಮದಲ್ಲಿ ನಿರ್ಮಿಸಿರುವ ನೂತನ ಜಿಟಿಟಿಸಿ ತರಬೇತಿ ಸಂಕೀರ್ಣದ ಉದ್ಘಾಟನಾ ಸಮಾರಂಭ ಜು.16ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಎಸ್.ಪಾಟೀಲ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ್, ಜಿಲ್ಲೆಯ ಶಾಸಕರು, ಇತರರು ಭಾಗವಹಿಸುವರು.