

ಹಾವೇರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿಜಯಮಹಾಂತೇಶ ದಾನಮ್ಮನವರ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ಮೂಲದ ವಿಜಯಮಹಾಂತೇಶ ಪಶು ವೈದ್ಯಕೀಯ ವಿಜ್ಞಾನದಲ್ಲಿ ಪದವಿ ಪಡೆದಿದ್ದಾರೆ. 2004-06ನೇ ಬ್ಯಾಚ್‌ನ ಕೆ.ಎ.ಎಸ್. ಅಧಿಕಾರಿಗಳಾಗಿದ್ದಾರೆ. ಬೆಂಗಳೂರಿನಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಹಾವೇರಿ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ರಘುನಂದನ ಮೂರ್ತಿ ಅವರು ಶನಿವಾರ ವಿಜಯಮಹಾಂತೇಶ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ರಘುನಂದನ ಮೂರ್ತಿ ಅವರನ್ನು ಬೆಂಗಳೂರು ಖಜಾನೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ವಿಜಯ ಮಹಾಂತೇಶ ಅವರು ಈ ಹಿಂದೆ ದಾವಣಗೆರೆ ಜಿಪಂ ಕಾರ್ಯನಿರ್ವಹಣಾಧಿಕಾರಿಯಾಗಿ, ವಿಜಯಪುರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.