ಹಾವೇರಿ: ಹಾವೇರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ, ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಮತ್ತು ನೂತನ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ ಕಾರ್ಯಕ್ರಮ ಜೂ.21ರಂದು ಮಧ್ಯಾಹ್ನ 12 ಗಂಟೆಗೆ ಇಲ್ಲಿನ ಶಿವಬಸವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಸಭೆಗೆ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ಹಾವೇರಿ ಗ್ರಾಮೀಣ ಮಂಡಲದ ಅಧ್ಯಕ್ಷ ಬಸವರಾಜ ಕಳಸೂರ ಪ್ರಕಟಣೆಯಲ್ಲಿ ಕೋರಿದ್ದಾರೆ.