ಹಾವೇರಿ: ಎನ್.ಎಚ್.ಎಂ. ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಮನೋವೈದ್ಯಕೀಯ ಸಮಾಜ ಸೇವಕ ಹುದ್ದೆ ಗುತ್ತಿಗೆ ಹಾಗೂ ಮೆರಿಟ್ ಆಧಾರದ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್ www.haveri.nic.in ನಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಜು.8ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆ ಅರ್ಜಿ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.